ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಧಾರವಾಡ-ಬೆಂಗಳೂರು `ವಂದೇ ಭಾರತ್ ರೈಲು’ ಮಾರ್ಚ್ ನಿಂದ ಶುರು : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ
ಇಂದು ಒಳನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6.5 ಸೆಂ.ಮೀ.ನಿಂದ 11.ಸೆಂ.ಮೀ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು ಮಂಡ್ಯ, ರಾಮನಗರ, ದಾವಣಗೆರೆ, ಮೈಸೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
BIGG NEWS : ಓಲಾ, ಉಬರ್ ಆಟೋಗೆ ಇಂದಿನಿಂದ 5,000 ರೂ. ದಂಡ : ರಸ್ತೆಗೆ ಇಳಿಸದಂತೆ ಸರ್ಕಾರ ಖಡಕ್ ಎಚ್ಚರಿಕೆ