ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ರೈತ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಡೀಸೆಲ್ ಗೆ ಸಬ್ಸಿಡಿ ನೀಡುವ `ರೈತ ಶಕ್ತಿ’ ಯೋಜನೆಗೆ ಚಾಲನೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಾಮರಾಜನಗರ, ಹಾಸನ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 29 ಮತ್ತು 30 ರಂದು ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ,ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.