ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಮುಂದಿನ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ನ.6 ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 4 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು – ಮಿಂಚಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
BIG NEWS: ಮಾಜಿ ಸಂಸದ ‘ಮುದ್ದ ಹನುಮೇಗೌಡʼ ಇಂದು ಅಧಿಕೃತವಾಗಿ ‘ಬಿಜೆಪಿ’ಗೆ ಸೇರ್ಪಡೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಸಮುದ್ರ ಮಟ್ಟದಿಂದ 7.7 ಕಿ.ಲೋ ಎತ್ತರದವರೆಹೆ ವ್ಯಾಪಿಸಿದೆ. ಈ ಮೇಲ್ಮೈ ಸುಳಿಗಾಳಿಯು ಉತ್ತರ ಒಳನಾಡಿನವರೆಗೂ ವ್ಯಾಪಿಸಿದೆ. ಹಾಗಾಗಿ ಮುಂದಿನ 5 ದಿನಗಳು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.