ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್-2022 : ಕುಸ್ತಿಯಲ್ಲಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಬಜರಂಗ್ ಪುನಿಯಾ

ರಾಜ್ಯ ರಾಜಧಾನಿ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದ್ದು, ಇಂದು ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Good News : ರಾಜ್ಯ ಸರ್ಕಾರದಿಂದ ‘ಕಾರ್ಮಿಕ’ರಿಗೆ ಭರ್ಜರಿ ಗುಡ್ ನ್ಯೂಸ್ : ‘ಡಿಜಿಟಲ್ ಹೆಲ್ತ್’ ಯೋಜನೆ ಜಾರಿ

ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಹಾಗೂ ವಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share.
Exit mobile version