ಬೆಂಗಳೂರು: ನಗರದಲ್ಲಿ ಕಳೆದ ಎರೆಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಮತ್ತೆ ನಗರದ ಜನರು ಹೈರಾಣು ಆಗಿದ್ದಾರೆ. ಇದೀಗ ಮಧ್ಯಾಹ್ನದ ಮೇಲೆ ಮತ್ತೆ ವರುಣ ಆರ್ಭಟಕ್ಕೆ ಶುರುವಾಗಿದೆ.
ನಗರದ ಶಾಂತಿನಗರ, ಮೆಜೆಸ್ಟಿಕ್ ಯಶವಂತಪುರ, ಕಾರ್ಪೊರೇಷನ್, ಕೆ.ಆರ್ ಮಾರ್ಕೆಟ್, ಜಯನಗರ, ವಿಜಯನಗರ ಮತ್ತು ಅತ್ತಿಗುಪ್ಪೆ ಮಳೆ ಆರಂಭವಾಗಿದೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.