ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಉತ್ತರ, ಒಳನಾಡು ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ 5 ದಿನ, ಕರಾವಳಿ ಭಾಗದಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ.
ಕೊಡಗು, ಚಿಕ್ಕಮಗಳೂರು, ಮಡಿಕೇರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನರ, ಕೋಲಾರದಲ್ಲಿ ಇಂದು ಸಂಜೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಮುಂದಿನ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಸಮುದ್ರ ಮಟ್ಟದಿಂದ 7.7 ಕಿ.ಲೋ ಎತ್ತರದವರೆಗೆ ವ್ಯಾಪಿಸಿದೆ. ಈ ಮೇಲ್ಮೈ ಸುಳಿಗಾಳಿಯು ಉತ್ತರ ಒಳನಾಡಿನವರೆಗೂ ವ್ಯಾಪಿಸಿದೆ. ಹಾಗಾಗಿ ಮುಂದಿನ 5 ದಿನಗಳು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಾನೂನು ಪದವೀಧರರ ಗಮನಕ್ಕೆ: ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
‘ಅವತಾರ್: ದಿ ವೇ ಆಫ್ ವಾಟರ್’ ಟ್ರೈಲರ್ ಬಿಡುಗಡೆ, ಈ ದಿನ ಬಿಡುಗಡೆಯಾಗಲಿದೆ ಚಿತ್ರ
BREAKING NEWS : ‘ಪ್ರವೀಣ್ ನೆಟ್ಟಾರು’ ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 14 ಲಕ್ಷ ರೂ.ಬಹುಮಾನ ಘೋಷಿಸಿದ ‘NIA’