ಬೆಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದರು. ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನರು ಹೈರಾಣಾಗಿದ್ದರು. ಇದೀಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ.
BIGG NEWS: ಎಸ್. ಸಿ ಎಸ್.ಟಿ ಮೀಸಲಾತಿ ಹೆಚ್ಚಿಸುವುದಕ್ಕೆ ಮೂರು ವರ್ಷ ಬೇಕಾ? ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಪ್ರಶ್ನೆ
ನಗರದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಕೋರಮಂಗಲ, ಶಾಂತಿನಗರ, ಮೆಜಿಸ್ಟಿಕ್, ಯಶವಂತಪುರ, ಮಲ್ಲೇಶ್ವರಂ ಸುತ್ತಮುತ್ತ ಮಳೆಯಾಗುತ್ತಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಾಗಿದ್ದು, ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.
ಇನ್ನು ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ.