ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂಥ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.  

ಇದಲ್ಲದೇ ಏಪ್ರಿಲ್ 18 ರಿಂದ 19 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣವು ಹೆಚ್ಚಾಗುವ ಸಾಧ್ಯತೆಯಿದೆ ಅಂತ ತಿಳಿಸಿದೆ.ಮುಂದಿನ 3 ಗಂಟೆಗಳಲ್ಲಿ ಚಾಮರಾಜನಗರ, ದಾವಣಗೆರೆ, ಕಲಬುರಗಿ, ಕೊಪ್ಪಳ, ಶಿವಮೊಗ್ಗದ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೇ ಅಂತ ತಿಳಿಸಿದೆ. ಇನ್ನೂ ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ, ಬಳ್ಳಾರಿ, ಧಾರವಾಡದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Share.
Exit mobile version