ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ : 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲಿ 48 ಗಂಟೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.