ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಛತ್ತೀಸ್ಗಢ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ಗೋವಾದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆ ಪ್ರಕಾರ, ನಾಳೆ ಸೆಪ್ಟೆಂಬರ್ 24 ರಂದು ಮಧ್ಯಪ್ರದೇಶ, ಛತ್ತೀಸ್ಗಢ, ಒಡಿಶಾ, ಮಹಾರಾಷ್ಟ್ರ, ಗೋವಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರ್ನಾಟಕ, ಕೇರಳ ಮತ್ತು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಇದೆ.
ಕರ್ನಾಟಕದಲ್ಲಿ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 23 ರ ಇಂದು ಸೆ.24 ನಾಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀಈ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ನಾಳೆ, ನಾಡಿದ್ದು ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬೀದರ್ ಮತ್ತು ಬಾಗಲಕೋಟೆಯಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣಮಳೆಯಾಗಲಿದೆ.