ಸುಭಾಷಿತ :

Monday, December 9 , 2019 2:36 PM

ಬೆಂಗಳೂರಿಗೆ ‘ಸೂಪರ್ ಸ್ಟಾರ್’ ರಜನಿಕಾಂತ್ ಭೇಟಿ : ‘ತಲೈವಾ’ ನೋಡಲು ಮುಗಿಬಿದ್ದ ಫ್ಯಾನ್ಸ್..!


Sunday, November 10th, 2019 8:17 pm

ಸಿನಿಮಾ ಡೆಸ್ಕ್ :  ಸೂಪರ್​ಸ್ಟಾರ್​ ರಜನೀಕಾಂತ್ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದರು, ತಮ್ಮ ಮೊಮ್ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದರು. ನೆಚ್ಚಿನ ನಟನನ್ನು  ಕಾಣಲು ಅಭಿಮಾನಿಗಳು ಮುಗಿಬಿದ್ದರು.

ಹೌದು, ಬೆಂಗಳೂರಿನ ರಾಧಾಕೃಷ್ಣ ಕಲ್ಯಾಣ ಮಂಟಪದಲ್ಲಿ ರಜನಿ ಅವರ ಸಹೋದರ ಸತ್ಯನಾರಾಯಣ ಅವರ ಪುತ್ರಿಯ ಮಗನ ಮದುವೆ ನಡೆದಿದ್ದು, ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ರಜನಿ ಬಂದಿದ್ದರು. ರಜನಿಯನ್ನೇ ನೋಡಲೆಂದೇ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಲ್ಯಾಣ ಮಂಟಪದಲ್ಲಿ ಜಮಾಯಿಸಿದ್ದರು.

ಅವರು ಕಲ್ಯಾಣ ಮಂಟಪಕ್ಕೆ ಬರುತ್ತಲೇ ಅವರೊಂದಿಗೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದರು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions