ಬೆಂಗಳೂರು: ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ ಪಕ್ಷಕ್ಕೆ ಬಂದ ದಿನದಿಂದ ನನಗೂ ಮುಖ್ಯಮಂತ್ರಿಯವರಿಗೂ ಬಿನ್ನಾಭಿಪ್ರಾಯಗಳು ಏನಾದರೂ ಇದೆಯಾ? ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿ ಮಾಡುತ್ತಿವೆ. ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಾಜಕೀಯವಾಗಿ ಹೇಳಿಕೆ ಕೊಟ್ಟಿರುತ್ತಾರೆ. ಇದಕ್ಕೆ ಬೇಸರ ಮಾಡಿಕೊಳ್ಳಲು ಆಗುತ್ತದೆಯೇ? ಅಣ್ಣ ತಮ್ಮಂದಿರೇ ಜಗಳ ಮಾಡುತ್ತಾರಂತೆ, ಇನ್ನು ನಮ್ಮದು ಯಾವ ಜಗಳ ಎಂದರು.
ಎಲ್ಲಾ ಕಾಂಗ್ರೆಸ್ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ನನ್ನ ಸ್ನೇಹಿತರು, ಸಹೋದ್ಯೋಗಿಗಳು, ಒಟ್ಟಿಗೆ ಇದ್ದೇವೆ. ನಾನಂತು ಯಾರ ಮೇಲೂ ಜಗಳ ಮಾಡಲು ಹೋಗಿಲ್ಲ. ಯಾವ ವಿಚಾರಕ್ಕೂ ಒಬ್ಬರ ಮೇಲೆ ಇನ್ನೊಬ್ಬರು ಇದುವರೆಗೂ ಹೇಳಿಕೆ ನೀಡಿಲ್ಲ. ದಾಖಲೆಗಳನ್ನು ತೆಗೆದು ನೋಡಿ. ವಿರೋಧ ಪಕ್ಷದವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು ನಾನಾಗಿಯೇ ಯಾರ ಮೇಲೂ ಹೇಳಿಕೆ ನೀಡಿಲ್ಲ. ನಾನಾಗಿಯೇ ಒಬ್ಬರ ಮೇಲಾದರೂ ಹೇಳಿಕೆ ನೀಡಿದ್ದರೆ ತಿಳಿಸಿ ಎಂದರು.
ರಾಜಣ್ಣ ಅವರು ನಮ್ಮ ಶಾಸಕರು, ನಮ್ಮ ಜತೆ ಮಂತ್ರಿಯಾಗಿದ್ದವರು. ಸೌಹಾರ್ದಯುತ ಭೇಟಿ ಮಾಡುತ್ತೇವೆ. ಶನಿವಾರ ಸರಿಯಾಗಿ ಮಾತನಾಡಲು ಆಗಲಿಲ್ಲ. ಅದಕ್ಕೆ ಇಂದು (ಭಾನುವಾರ) ಸಹ ಭೇಟಿ ಮಾಡುತ್ತೇನೆ ಎಂದು ಹೇಳಿದ್ದೇನೆ. ರಾಜ್ಯಪಾಲರ ಕಾರ್ಯಕ್ರಮ ಇರುವ ಕಾರಣಕ್ಕೆ ಆನಂತರ ಭೇಟಿ ಮಾಡುತ್ತೇನೆಎಂದರು.
ಡಿ.23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ವಿದ್ಯುತ್ ವ್ಯತ್ಯಯ | Power Cut
ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ








