ಬೆಂಗಳೂರು : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ್ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಗಲಾಟೆ ನಡೆದು ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜಶೇಖರ್ ಸಾವನ್ನಪ್ಪಿದ್ದು, ನಮ್ಮ ಪಕ್ಷದ ಕಾರ್ಯಕರ್ತರನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರ ಕುಮ್ಮಕ್ಕಿನಿಂದಲೇ ಬಳ್ಳಾರಿಯಲ್ಲಿ ಈ ಗಲಾಟೆ ಆಗಿದೆ. ಬಿಜೆಪಿಗರಿಗೆ ಮಾನ ಮರ್ಯಾದೆ ಇದ್ದರೆ ಬಾಯಿ ಮುಚ್ಚಿಕೊಂಡು ಇರಬೇಕು. ಏನಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಗೊತ್ತಾಗುತ್ತದೆ. ಮಾಜಿ ಸಚಿವ ಶ್ರೀ ರಾಮುಲು ಬಂದು ಬ್ಯಾನರ್ ಹರಿದು ಹಾಕಿದ್ದಾರೆ ಎಂದು ಆರೋಪಿಸಿದರು.
ನಮ್ಮ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಈಡಾಗಲು ಬಿಜೆಪಿನೇ ಕಾರಣ. ಕಾಂಗ್ರೆಸ್ ಪಕ್ಷದಲ್ಲಿರುವ ಯುವಕರನ್ನು ಕೆಣಕಬೇಡಿ. ವಿನಾಕಾರಣ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸರಿ ಇರಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ ಕೆಲವರನ್ನು ಅರೆಸ್ಟ್ ಸಹ ಮಾಡಿದ್ದಾರೆ ತನಿಖೆ ಬಳಿಕ ಎಲ್ಲಾ ಗೊತ್ತಾಗುತ್ತದೆ ಎಂದು ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು.








