ನವದೆಹಲಿ : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ದೆಹಲಿಯಲ್ಲಿ ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ನಂತ್ರ ಈ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, “ನಾನು ಈ ವಿಷಯವನ್ನ ಅವರ ಬಳಿಯೇ ಇಟ್ಟುಕೊಂಡಿದ್ದೇನೆ. ನಿನ್ನೆಯ ಘಟನೆ ನಮ್ಮೆಲ್ಲರನ್ನು ಬೆಚ್ಚಿಬೀಳಿಸಿದೆ ಎಂದರು. ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸುತ್ತೇನೆ ಎಂಬ ಸಂದೇಶ ಇಡೀ ದೇಶಕ್ಕೆ ಹೋಗಿದೆ, ನಾನು ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದೇನೆ. ಕಳೆದ 50 ವರ್ಷಗಳಿಂದ ಕಾಂಗ್ರೆಸ್ಗೆ ನಿಷ್ಠೆಯಿಂದ ದುಡಿದ ನಾನು ಸೋನಿಯಾ ಗಾಂಧಿಯವರ ಆಶೀರ್ವಾದದಿಂದ ಮೂರನೇ ಬಾರಿಗೆ ಸಿಎಂ ಆಗಿದ್ದೇನೆ” ಎಂದರು.
I won't contest these elections in this atmosphere, with moral responsibility, said Rajasthan CM Ashok Gehlot
On being asked if he will remain Rajasthan CM, Gehlot said, "I won't decide that, Congress chief Sonia Gandhi will decide that." pic.twitter.com/arRFlDrazd
— ANI (@ANI) September 29, 2022