ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ( Rajiv Gandhi assassination case ) ಅಪರಾಧಿಗಳನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ( Supreme Court ) ಹೊಸ ಮರುಪರಿಶೀಲನಾ ಅರ್ಜಿಯನ್ನು ಕಾಂಗ್ರೆಸ್ ಪಕ್ಷದಿಂದ ( Congress Party ) ಸಲ್ಲಿಸಲಾಗಿದೆ.
ಈಗಾಗಲೇ ಕೇಂದ್ರ ಸರ್ಕಾರದಿಂದ ರಾಜೀವ್ ಗಾಂಧಿ ಹತ್ಯೆ ಆರೋಪಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಲಾಗಿದೆ. ಈ ಬೆನ್ನಲ್ಲೇ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ, ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಹೊಸ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಿದೆ.
ಅಂದಹಾಗೇ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡುವಂತ ತಮಿಳುನಾಡು ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಆರೋಪಿ ನಳಿನಿ ಸೇರಿದಂತೆ ಎಲ್ಲರನ್ನು ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಈ ಬಳಿಕ ತಮಿಳುನಾಡಿನ ಜೈಲಿನಲ್ಲಿದ್ದಂತ ರಾಜೀವ್ ಗಾಂಧಿ ಆರೋಪಿಗಳನ್ನು ಬಿಡುಗಡೆ ಕೂಡ ಮಾಡಲಾಗಿತ್ತು.