ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲ, ನಮ್ಮಸರ್ಕಾರ ಒತ್ತುವರಿ ತೆರವಿಗೆ ಯಾವುದೇ ತಾರತಮ್ಯ ಮಾಡಲ್ಲ ಎಂದು ಕಂದಾಯ ಸಚಿವ ಆರ್.ಆಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕಾಲುವೆ ಒತ್ತುವರಿದಾರರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ಮಹದೇವಪುರ ವಲಯದ 15 ಸ್ಥಳಗಳಲ್ಲಿ ತೆರವು
ಈ ಬಗ್ಗೆ ಕಂದಾಯ ಸಚಿವ ಆರ್.ಆಶೋಕ್ ಮಾತನಾಡಿ, ಯಾವುದೇ ಒತ್ತುವರಿ ಇದ್ದರೂ ನಾವು ತೆರವು ಮಾಡುತ್ತೇವೆ ನಮ್ಮಸರ್ಕಾರ ಒತ್ತುವರಿ ತೆರವಿಗೆ ಯಾವುದೇ ತಾರತಮ್ಯ ಮಾಡಲ್ಲ. ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲ. ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಎಂದು ಕಂದಾಯ ಸಚಿವ ಪ್ರತಿಕ್ರಿಯೆ ನೀಡಿದ್ದೇವೆ
ರಾಜಕಾಲುವೆ ಒತ್ತುವರಿದಾರರಿಗೆ ಬಿಗ್ ಶಾಕ್: ಬಿಬಿಎಂಪಿಯಿಂದ ಮಹದೇವಪುರ ವಲಯದ 15 ಸ್ಥಳಗಳಲ್ಲಿ ತೆರವು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ನಿನ್ನೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ. ಇಂದು ಎರಡನೇ ದಿನವೂ ಒತ್ತುವರಿ ಕಟ್ಟಡಗಳ ತೆರವು ಕಾರ್ಯ ಮುಂದಾಗಿದ್ದು, ಮುನೇನಕೊಳಲು ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯ ನಡೆಸಲಾಗುತ್ತಿದೆ.