ನವದೆಹಲಿ: ಪ್ರಧಾನಿಯಾಗಿ ಮೂರನೇ ಬಾರಿಗೆ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಕೇಂದ್ರ ಸಚಿವರಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ.
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದಂತ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪದಗ್ರಹಣ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.