ನವದೆಹಲಿ: ಅದಾನಿ ವಂಚನೆ ಪ್ರಕರಣ ಸಂಬಂಧ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರಿಂದ ಗದ್ದಲ ಕೋಲಾಹಲವನ್ನೇ ಉಂಟು ಮಾಡಲಾಯಿತು. ಈ ಹಿನ್ನಲೆಯಲ್ಲಿ ರಾಜ್ಯಸಭೆ ಕಲಾಪವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಯಿತು.
ಇದಕ್ಕೂ ಮೊದಲು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಎನ್ಡಿಎ ಮೈತ್ರಿಕೂಟದ ಸದನ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು. ಸಂಸತ್ ಅಧಿವೇಶನದಲ್ಲಿ ಎತ್ತಬೇಕಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಅದಾನಿ ವಿಷಯದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆಯ ಮಧ್ಯೆ ಸದನದಲ್ಲಿ ಗದ್ದಲದ ಕಾರಣ ಲೋಕಸಭೆಯನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು.
ಈ ನಂತ್ರ ರಾಜ್ಯಸಭೆಯಲ್ಲೂ ಇದೇ ವಿಷಯಕ್ಕೆ ಗದ್ದಲ ಉಂಟಾದಾಗ, ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ನವೆಂಬರ್ 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
Rajya Sabha adjourned for the day; to meet again at 11 A.M on Thursday, 28th November.
— ANI (@ANI) November 27, 2024
ಖಾಯಂ ನಿರೀಕ್ಷೆಯಲ್ಲಿದ್ದ ‘NHM ನೌಕರ’ರಿಗೆ ಬಿಗ್ ಶಾಕ್: ಸ್ಕೀಂ ಮುಗಿದ ಮೇಲೆ ನೋಡೋಣವೆಂದ ‘ಆರೋಗ್ಯ ಸಚಿವ’ರು
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut