ನವದೆಹಲಿ: ನಾಳೆ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಆದ್ರೇ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪೈಕಿ ಶೇ.36 ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ರೂ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ (ADR) ವಿಶ್ಲೇಷಣೆ ಮಾಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಎಡಿಆರ್, 15 ರಾಜ್ಯಗಳಲ್ಲಿ 56 ಸ್ಥಾನಗಳಿಗೆ ಕಣದಲ್ಲಿರುವ 59 ಅಭ್ಯರ್ಥಿಗಳ ಅಫಿಡವಿಟ್ ಗಳನ್ನು ವಿಶ್ಲೇಷಣೆ ಮಾಡಲಾಗಿದೆ. ಕಳಪೆ ಸ್ಕ್ಯಾನ್ ಮಾಡಿದ ದಾಖಲೆಗಳ ಕಾರಣದಿಂದ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ ಚಂದ್ರಶೇಖರ್ ಅವರನ್ನು ವಿಶ್ಲೇಷಣೆಯಿಂದ ಕೈಬಿಡಲಾಗಿದೆ.
ಇನ್ನು ರಾಜ್ಯಸಭಾ ಚುನಾವಣೆಯ ಕಣದಲ್ಲಿರುವಂತ ಅಭ್ಯರ್ಥಿಗಳ ಪೈಕಿ ಶೇ.17 ವ್ಯಕ್ತಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಒಬ್ಬ ಅಭ್ಯರ್ಥಿಯ ವಿರುದ್ಧ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ.
30 ಬಿಜೆಪಿ ಅಭ್ಯರ್ಥಿಗಳಲ್ಲಿ 8, ಒಂಭತ್ತು ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ 6, ನಾಲ್ಕು ಟಿಎಂಸಿ ಅಭ್ಯರ್ಥಿಗಳಲ್ಲಿ ಒಬ್ಬರು, ಎಸ್ಪಿಯ ಮೂವರಲ್ಲಿ ಇಬ್ಬರು, ವೈಎಸ್ಆರ್ ಸಿಪಿಯ ಮೂವರು ಅಭ್ಯರ್ಥಿಗಳಲ್ಲಿ ಒಬ್ಬರು, ಇಬ್ಬರು ಆರ್ ಜೆಡಿ ಅಭ್ಯರ್ಥಿಗಳಲ್ಲಿ ಒಬ್ಬರು, ಇಬ್ಬರು ಬಿಜೆಡಿ ಅಭ್ಯರ್ಥಿಗಳಲ್ಲಿ ಒಬ್ಬರು ಹಾಗೂ ಬಿಆರ್ ಎಸ್ ಅಭ್ಯರ್ಥಿಯೊಬ್ಬರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಮ ಇದೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ.