ಬೆಂಗಳೂರು: ರಾಜ್ಯಸಭೆಯ 4 ಸ್ಥಾನಗಳಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನವನ್ನು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಮಾಡಿರುವುದಾಗಿ ತಿಳಇದು ಬಂದಿದೆ.
ಇಂದು ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ನನ್ನ ಆತ್ಮಸಾಕ್ಷಿಯಾಗಿ ಅನುದಾನದ ಭರವಸೆ ನೀಡಿದವರಿಗೆ ಮತ ಚಲಾಯಿಸಿದ್ದೇನೆ ಎಂಬುದಾಗಿ ತಿಳಿಸಿದರು. ಈ ಮೂಲಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿರೋದನ್ನು ಖಚಿತ ಪಡಿಸಿದ್ದಾರೆ.
ಅಂದಹಾಗೇ 9 ಗಂಟೆಯಿಂದ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಈವರೆಗೆ 116 ಶಾಸಕರು ಮತದಾನ ಮಾಡಿದ್ದಾರೆ. ಇನ್ನೂ ಮತ್ತಷ್ಟು ಶಾಸಕರು ಮತದಾನ ಮಾಡುತ್ತಿದ್ದಾರೆ.
BREAKING: ರಾಜ್ಯಸಭೆ 4 ಸ್ಥಾನಗಳಿಗೆ ‘ಮತದಾನ’ ಪ್ರಕ್ರಿಯೆ ಆರಂಭ: ಮೊದಲು ಮತ ಚಲಾಯಿಸಿದ ‘ಎಸ್.ಸುರೇಶ್ ಕುಮಾರ್’