ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ( Rajya Sabha Election ) ರಾಜ್ಯ ರಣಾಂಗಣ ರಂಗೇರಿದೆ. ಈ ಬೆನ್ನಲ್ಲೇ, ಕಾಂಗ್ರೆಸ್ ಗೆ ಆಪರೇಷನ್ ಕಮಲದ ( Operation Kamala ) ಭೀತಿ ಎದುರಾಗಿದೆ. ಇದೇ ಕಾರಣದಿಂದ ತಮ್ಮ ಶಾಸಕರನ್ನು ಭದ್ರಪಡಿಸಿಕೊಳ್ಳೋ ಕಾರಣದಿಂದಾಗಿ, ಕಾಂಗ್ರೆಸ್ ಶಾಸಕರನ್ನು ( Congress MLA’s ) ರೆಸಾರ್ಟ್ ಗೆ ಶಿಫ್ಟ್ ಮಾಡೋದಕ್ಕಾಗಿ ಚಿಂತನೆ ನಡೆಸಿದೆ.
ಈ ಹಿನ್ನಲೆಯಲ್ಲಿ ರಾಜಸ್ಥಾನದ ಉದಯಪುರದಲ್ಲಿರುವಂತ ರೆಸಾರ್ಟ್ ಒಂದರಲ್ಲಿನ 40 ರೂಮ್ ಗಳನ್ನು ಬುಕ್ ಮಾಡಲಾಗಿದೆ ಎನ್ನಲಾಗಿದೆ. ಕರ್ನಾಟಕದ ಕಾಂಗ್ರೆಸ್ ಶಾಸಕರನ್ನು ರಾಜ್ಯಸಭೆ ಚುನಾವಣೆಯವರೆಗೆ ಈ ರೆಸಾರ್ಟ್ ಗೆ ಕಾಂಗ್ರೆಸ್ ಶಿಫ್ಟ್ ಮಾಡಲಿದೆ ಎನ್ನಲಾಗುತ್ತಿದೆ. ಜೂನ್ 10ರಂದು ನಡೆಯಲಿರುವಂತ ರಾಜ್ಯಸಭೆ ಚುನಾವಣೆಯ ಮತದಾನದಂದು ರೆಸಾರ್ಟ್ ನಿಂದ ಚುನಾವಣಾ ಕೇಂದ್ರಕ್ಕೆ ಕರೆತರಲಾಗುತ್ತದೆ ಎನ್ನಲಾಗಿದೆ.
BIG NEWS: ‘ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ್’ ಹೆಸರಿನಲ್ಲಿ ವಂಚನೆ, ದೂರು ದಾಖಲು
ಅಂದಹಾಗೇ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ಮೂವರು, ಕಾಂಗ್ರೆಸ್ ನಿಂದ ಇಬ್ಬರು ಹಾಗೂ ಜೆಡಿಎಸ್ ನಿಂದ ಓರ್ವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಆದ್ರೇ.. ಬಿಜೆಪಿಯ ಮೂರನೇ ಅಭ್ಯರ್ಥಿ, ಕಾಂಗ್ರೆಸ್ ನ ಎರಡನೇ ಅಭ್ಯರ್ಥಿ ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿಗೆ ಮತಗಳ ಕೊರತೆ ಇದೆ. ಈ ಕಾರಣದಿಂದಾಗಿ ಮತ್ತೊಂದು ಪಕ್ಷದ ಮತಗಳ ಮೇಲೆ ಭವಿಷ್ಯ ನಿರ್ಧಾರವಾಗಲಿದೆ.
ಇದೇ ಕಾರಣದಿಂದ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಜೆಪಿ ಆಪರೇಷನ್ ಕಮಲ ನಡೆಸಲಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಜೆಡಿಎಸ್ ಸಾಲು ಸಾಲು ನಾಯಕರು ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ, ತಮ್ಮ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿದ್ದಾರೆ. ಈ ಎಲ್ಲಾ ಕಾರಣದಿಂದಾಗಿ ಇದೀಗ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡುತ್ತಿದೆ ಎಂಬುದಾಗಿ ತಿಳಿದು ಬಂದಿದೆ.