ಸುಭಾಷಿತ :

Wednesday, January 29 , 2020 9:39 PM

‘ಅತ್ಯಾಚಾರಿಗಳನ್ನು ನಪುಂಸಕರನ್ನಾಗಿ ಮಾಡಿ’ : ಪಶುವೈದ್ಯೆ ‘ಹತ್ಯಾಚಾರ’ಕ್ಕೆ ನಟಿ ರಾಖಿ ಸಾವಂತ್ ಆಕ್ರೋಶ


Tuesday, December 3rd, 2019 7:12 pm

ಹೈದರಾಬಾದ್​: ಇಡೀ ದೇಶಾದ್ಯಂತ ಸಂಚಲನ ಮೂಡಿಸಿರುವ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

ತೆಲಂಗಾಣದ ಹೈದರಾಬಾದ್‌ ಹೊರವಲಯದ ಶಂಶಾಬಾದ್‌ನಲ್ಲಿ ನಡೆದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇಂಥ ಹೀನ ಕೃತ್ಯವನ್ನು ಖಂಡಿಸಿ ದೇಶಾದ್ಯಂತ ಈಗಾಗಲೇ ಪ್ರತಿಭಟನೆಗಳು ಆರಂಭಗೊಂಡಿವೆ.  ಇನ್ನೂ ಸೆಲೆಬ್ರಿಟಿಗಳು ಕೂಡ ಇಂತಹ ಹೀನ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ನಟಿ ರಾಖಿ ಸಾವಂತ್ ಕೂಡ ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಪ್ರಕರಣಕ್ಕೆ ಇನ್ ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡುವ ಆಕ್ರೋಶ ಹೊರ ಹಾಕಿದ್ದಾರೆ.

ಸ್ನೇಹಿತರೇ ಈ ವಿಷಯ ನನಗೆ ಬಹಳ ದುಖ ತಂದಿದೆ, ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಆರೋಪಿಗಳು ನಂಬಿಕೆಗೆ ಅರ್ಹರಲ್ಲ, ಯುವತಿಯರೇ ರಾತ್ರಿ ವೇಳೆ ಹೋಗುವಾಗ ಸುರಕ್ಷಿತವಾಗಿರಿ, ನಿಮ್ಮ ಮಾನವನ್ನು ನೀವೇ ಉಳಿಸಿಕೊಳ್ಳಿ ಏಕೆಂದರೆ ನಿಮ್ಮ ಮಾನ ಉಳಿಸಿಕೊಳ್ಳಲು ಯಾರೂ ಬರಲ್ಲ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಾನು ಈ ದೇಶದ ಕಾನೂನಿಗೆ ಹೇಳಲು ಬಯಸುವುದೇನೆಂದರೆ ಗಲ್ಲಿಗೇರಿಸಲು ಆಗಿಲ್ಲ ಅಂದರೆ ಅವರನ್ನು ನಪುಂಸಕನನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions