ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ. ಈ ವಿಷಯದ ಕುರಿತಾಗಿ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ರಾಮನ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಯಾವ ಅಡೆತಡೆ ಇಲ್ಲದೆ ಕಾರ್ಯಕ್ರಮ ನಡೆಯುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಮೋದಿ ಎರಡು ದಿನ ಮೊದಲೇ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಎಲ್ಲರೂ ಬರುವುದು ಬೇಡ ಅಂತ ನಮಗೆ ಪ್ರಮುಖರ ಸೂಚನೆ ಇದೆ. 15 ದಿನದ ನಂತರ ಎಲ್ಲಾ ಸ್ನೇಹಿತರ ಜೊತೆಗೆ ನಾನು ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.