ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಸುಸಂದರ್ಭದಲ್ಲಿ ಭಾಗಿಯಾಗೋದಕ್ಕಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುಟುಂಬ ಸಮೇತರಾಗಿ ತೆರಳಿದ್ದಾರೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಚನ್ನಮ್ಮ ಅಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.
ನಾಳೆ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ, ಶ್ರೀರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಕುಟುಂಬ ಭಾಗಿಯಾಗಲಿದೆ.
ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಹೇಳಿದ್ದನು?