ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಮೂರ್ತಿಯನ್ನು ಕೆತ್ತಿದಂತ ಶಿಲ್ಪಿ ಅರುಣ್ ಯೋಗಿರಾಜ್ ತಾಯ್ನಾಡಿಗೆ ಆಗಮಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದಂತ ಅವರನ್ನು ರಾಮ ಭಕ್ತರು ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ.
ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವಂತ ರಾಮಲಲ್ಲಾ ಮೂರ್ತಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಮೂರ್ತಿ ಆಯ್ಕೆಯಾಗಿತ್ತು. ಆ ಬಳಿಕ ಅಯೋಧ್ಯೆಗೆ ಆ ಮೂರ್ತಿಯನ್ನು ಕೊಂಡೊಯ್ದು, ಜನವರಿ.22ರಂದು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಪ್ರತಿಷ್ಠಾಪಿಸಿ, ಪ್ರಾಣ ಪ್ರತಿಷ್ಠಾಪನೆಯನ್ನು ಮಾಡಲಾಗಿದೆ.
ಈ ಎಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಕನ್ನಡಿಗ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್, ಅಲ್ಲಿಂದ ಇಂದು ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರ ಸ್ವಾಗತಕ್ಕೆ ಬಿಜೆಪಿ ನಾಯಕರು, ಕಾರ್ಯಕರ್ತರು, ರಾಮ ಭಕ್ತರು ಸಹಸ್ರ ಸಂಖ್ಯೆಯಲ್ಲಿ ನೆರೆದಿದ್ದರು.
ಇದೀಗ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದಂತ ಅವರನ್ನು ಅದ್ದೂರಿಯಾಗಿ ಪುಷ್ಪಮಾಲೆಯಾಗಿ ಸ್ವಾಗತಿಸಿದರು. ಈ ಮೂಲಕ ರಾಮಲಲ್ಲಾ ಮೂರ್ತಿ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್ ಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ ಮಾಡಲಾಗಿದೆ.
ಅಂದಹಾಗೇ ಶಿಲ್ಪಿ ಅರುಣ್ ಯೋಗಿರಾಜ್ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಬ್ಬೆಹುಂಡಿ ಗ್ರಾಮದವರು. ಸದ್ಯಕ್ಕೆ ಮೈಸೂರಿನಲ್ಲೇ ವಾಸವಾಗಿದ್ದಾರೆ.
ಶಕ್ತಿ ಯೋಜನೆಯಡಿ ಇದುವರೆಗೆ 139.36ಕೋಟಿ ಹೆಣ್ಣು ಮಕ್ಕಳ ಪ್ರಯಾಣ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್