ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದೆ. ಈ ನಡುವೆ ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆಯ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಅಂದ ಹಾಗೇ ಇನ್ನೂ ಕೂಡ ಅಯೋಧ್ಯೆಯ ರಾಮ್ ಲಲ್ಲಾನ ಯಾರ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಬೇಕು ಎನ್ನುವುದನ್ನು ನಿರ್ಧಾರ ಮಾಡಿಲ್ಲ ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ ರಾಜಸ್ಥಾನ ಮತ್ತು ಬೆಂಗಳೂರು, ಮೈಸೂರಿನ ಪ್ರಸಿದ್ಧ ಶಿಲ್ಪಿಗಳು ಕೆತ್ತಿದ ಮೂರು ವಿಗ್ರಹಗಳಲ್ಲಿ ಒಂದನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು 51 ಇಂಚಿನ ವಿಗ್ರಹ ಕೆತ್ತಿದ್ದು, ಯಾರ ವಿಗ್ರಹ ಆಯ್ಕೆ ಮಾಡುವುದಕ್ಕೆ ಈಗಾಗಲೇ ಪರಿಶೀಲನೆ ಸಭೆ ನಡೆದಿದ್ದು, ಇನ್ನೇನು ಕೆಲವೇ ದಿನದಲ್ಲಿ ಯಾರ ವಿಗ್ರಹ ಪ್ರತಿಷ್ಠಾಪನೆಯಾಗಲಿದೆ ಎನ್ನುವುದಕ್ಕೆ ಉತ್ತರ ಸಿಗಲಿದೆ.