ಬಳ್ಳಾರಿ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತದ ‘ಅಗ್ನಿ-5 ಕ್ಷಿಪಣಿ’ ಉಡಾವಣೆಯ ಮೇಲೆ ಬೇಹುಗಾರಿಕಾ ಹಡಗನ್ನು ನಿಯೋಜಿಸಿದ ಚೀನಾ: ವರದಿ
ಜಿಲ್ಲೆಯಿಂದ ಅರ್ಹ 04 ವಿದ್ಯಾರ್ಥಿಗಳಿಗೆ ಸೌಲಭ್ಯವಿದ್ದು, ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲಾಗುವುದು.ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ 6 ಮತ್ತು 7 ನೇ ತರಗತಿಯ ಅಂಕಪಟ್ಟಿ ಹಾಗೂ ಇತರೆ ದಾಖಲೆ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ‘ಅಗ್ನಿ-5 ಕ್ಷಿಪಣಿ’ ಉಡಾವಣೆಯ ಮೇಲೆ ಬೇಹುಗಾರಿಕಾ ಹಡಗನ್ನು ನಿಯೋಜಿಸಿದ ಚೀನಾ: ವರದಿ