ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಸಿಪಿ ಯೋಗೇಶ್ವರ್ ಅವರು ಕಳೆದ ಎರಡು ದಿನಗಳ ಹಿಂದೆ ಅವರ ಬೆಂಬಲಿಗರು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಡಿಕೆ ಬ್ರದರ್ಸ್ ಈ ಒಂದು ಬಿಗ್ ಆಪರೇಷನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಇದೀಗ ಇದಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಿವರ್ಸ್ ಆಪರೇಷನ್ ಮಾಡಿದ್ದು, ರಾಮನಗರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಇದೀಗ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದ್ದಾರೆ.
ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಮನಗರ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಸೈಯದ್ ಅಸ್ಗರ್ ಹಲಿರವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಚನ್ನಪಟ್ಟಣದ ಯರಬ್ ನಗರದಲ್ಲಿರುವ ಹಲಿರವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು ಜೆಡಿಎಸ್ ಪಕ್ಷದ ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.