ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಮರುನಾಮಕರಣ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಹೀಗಾಗಿ ಇನ್ಮುಂದೆ ರಾಮನಗರ ಜಿಲ್ಲೆಯು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಕರೆಯಲಾಗುತ್ತದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಭೂ ಕಂದಾಯ ಅಧಿನಿಯಮ 1946ರ ಕಲಂ 4(4ಎ)ರಲ್ಲಿ ಕಲ್ಪಿಸಿರುವ ಅವಕಾಶದಂತೆ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ, ರಾಮನಗರ ಜಿಲ್ಲೆ ಅನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಆದೇಶಿಸಿದ್ದಾರೆ.
ದೇವನಾಗರಿ, ರೋನ್ ಲಿಪಿ ಮತ್ತು ಪ್ರಾದೇಶಿಕ ಭಾಷೆ ಕನ್ನಡ ಉಚ್ಚಾರಣೆಯಂತೆ ಹೊಸ ಹೆಸರನ್ನು ರಾಮನಗರ ಜಿಲ್ಲೆಯನ್ನು ಬೆಂಗಳೂರು ಸೌತ್ ಡಿಸ್ಟಿಕ್, ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಮರುನಾಮಕರಣ ಮಾಡಿರುವುದಾಗಿ ತಿಳಿಸಿದ್ದಾರೆ.