ಶಿವಮೊಗ್ಗ: ರಂಭಾಪುರಿ ಶ್ರೀಗಳು ಮತ್ತು ಸಿದ್ದರಾಮಯ್ಯ ನಡುವೆ ಚರ್ಚೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮ ಒಡೆಯುವ ಕೆಲಸ ಮಾಡೋಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ. ಆದರೆ ಅವರು ಹಾಗೇ ಹೇಳಿಲ್ಲ ಎಂದು ಮಾತನಾಡುತ್ತಿದ್ದಾರೆ.
ಇದರಿಂದ ರಂಭಾಪುರಿ ಶ್ರೀಗಳು ಹೇಳಿದ್ದು ಸತ್ಯವೋ ಅಥವಾ ಸಿದ್ದರಾಮಯ್ಯ ಹೇಳಿದ್ದು ಸತ್ಯವೋ ಎಂಬುವುದನ್ನು ಅವರುಗಳೇ ಬಹಿರಂಗ ಪಡಿಸಬೇಕೆಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಧರ್ಮ ಒಡೆಯವ ಕೆಲಸದಲ್ಲಿ ಇನ್ಮುಂದೆ ಹೋಗುವುದಿಲ್ಲ. ಹಿಂದೆ ಮಾಡಿದ್ದೆ ನನಗೆ ಪಶ್ಚಾತ್ತಾಪವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ. ಆದರೆ ಅದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಹೇಳಿಕೆ ನಿರಾಕರಿಸಿದ್ದಾರೆ.ಇದರಿಂದ ಯಾರು ಸರಿ ಎಂಬುದನ್ನು ಅವರೇ ಬಹಿರಂಗ ಪಡಿಸಬೇಕು ಎಂದರು.