ಸುಭಾಷಿತ :

Tuesday, April 7 , 2020 5:50 PM

ಜನ ಮೆಚ್ಚುಗೆಗೆ ಪಾತ್ರವಾಗಿದೆ ಟಾಲಿವುಡ್ ನಟ ‘ರಾಮ್ ಚರಣ್’ ಮಾಡಿರುವ ಈ ಕೆಲಸ…!


Thursday, February 13th, 2020 7:33 pm

ಸಿನಿಮಾ ಡೆಸ್ಕ್ : ಟಾಲಿವುಡ್ ನಟ ರಾಮ್ ಚರಣ್ ಅವರು ಅಭಿಮಾನಿಯ ಕುಟುಂಬಕ್ಕೆ ಮಾಡಿದ ಸಹಾಯಕ್ಕೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಹೌದು, ಡಿಸೆಂಬರ್ ನಲ್ಲಿ ನಿಧನರಾದ ತಮ್ಮ ಹಿರಿಯ ಅಭಿಮಾನಿಯ ಕುಟುಂಬಕ್ಕೆ 10 ಲಕ್ಷ ರೂ. ಚೆಕ್ ನೀಡಿದ್ದಾರೆ.ಕಳೆದ ವರ್ಷ ‘ಗ್ರೇಟರ್ ಹೈದರಾಬಾದ್ ಮೆಗಾ ಫ್ಯಾನ್ಸ್ ಅಸೋಸಿಯೇಷನ್’ ಅಧ್ಯಕ್ಷರಾಗಿದ್ದ ನೂರ್ ಅಹಮ್ಮದ್ ನಿಧನರಾಗಿದ್ದರು. ಈ ಹಿನ್ನೆಲೆ ಟಾಲಿವುಡ್ ನಟ ರಾಮ್ ಚರಣ್ ಅಭಿಮಾನಿಯ ಕುಟುಂಬಕ್ಕೆ 10 ಲಕ್ಷ ರೂ ಧನಸಹಾಯ ನೀಡಿದ್ದಾರೆ.

ರಾಮ್ ಚರಣ್  ನೂರ್ ಅಹಮ್ಮದ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸದ್ಯ ರಾಮ್ ಚರಣ್ ಅವರು ನಿರ್ದೇಶಕ ಎಸ್‍ಎಸ್ ರಾಜಮೌಳಿ ನಿರ್ದೇಶಿಸುತ್ತಿರುವ ‘ಆರ್‌ಆರ್‌ಆರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions