ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ಎಂಎಲ್ಸಿಯಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಆರಥಿ ಕೃಷ್ಣ, ಎಫ್ ಹೆಚ್ ಜಕ್ಕಪ್ಪನವರ್, ಶಿವಕುಮಾರ್ ಕೆ ಹಾಗೂ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದೆ.
ಕಾಂಗ್ರೆಸ್ ನಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಆರತಿ ಕೃಷ್ಣರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗಿದೆ. ಜೊತೆಗೆ ಕಾಂಗ್ರೆಸ್ ಮಾಧ್ಯಮ ವಕ್ತಾರ ರಮೇಶ್ ಬಾಬುಗೆ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ನಾಮನಿರ್ದೇಶನ ಮಾಡಲಾಗಿದೆ. ಮೈಸೂರಿನ ಪತ್ರಕರ್ತ ಶಿವಕುಮಾರ್ ರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗಿದೆ.
ಈ ಹಿಂದೆ ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡುವುದಕ್ಕೆ ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿತ್ತು.
ಜಕ್ಕಪ್ಪ ಮತ್ತು ಆರತಿ ಕೃಷ್ಣ ಕಾಂಗ್ರೆಸ್ ಪಕ್ಷದ ಹೈಕಮ್ಯಾಂಡ್ ಕೋಟಾದ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದರೇ, ಇನ್ನೂ ಸಿಎಂ ಕೋಟಾದಿಂದ ರಮೇಶ್ ಬಾಬು ಮತ್ತು ಪತ್ರಕರ್ತ ಶಿವಕುಮಾರ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.
ಜಕ್ಕಪ್ಪ ಮತ್ತು ಪತ್ರಕರ್ತ ಶಿವಕುಮಾರ್ ದಲಿತ ಬಲಗೈ ಸಮುದಾಯದವರು. ಶಿವಕುಮಾರ್ ಸದ್ಯ ಮೈಸೂರಿನಲ್ಲಿ ಇಂಗ್ಲೀಷ್ ದಿನಪತ್ರಿಕೆಯ ಹಿರಿಯ ಪತ್ರಕರ್ತರಾಗಿದ್ದಾರೆ.
ವಸಂತ ಬಿ ಈಶ್ವರಗೆರೆ.. ಸಂಪಾದಕರು