ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಈ ಸಮಿತಿಯ ಅಧ್ಯಕ್ಷರಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥರಾದಂತ ರಮೇಶ್ ಬಾಬು ಅವರನ್ನು ನೇಮಕ ಮಾಡಿದೆ.
ಇಂದು ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು, ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ, ಸದರಿ ಸಮಿತಿಗೆ ಈ ಕೆಳಕಂಡವರನ್ನು ಮುಂದಿನ ಆದೇಶದವರೆಗೆ ಅಧ್ಯಕ್ಷರು, ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ.
ನೂತನ ಜಾಹೀರಾತು ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಇನ್ನೂ ಸದಸ್ಯರನ್ನಾಗಿ ಕೆಪಿಸಿಸಿಯ ಜನರಲ್ ಸೆಕ್ರೇಟರಿ ಎಂ ರಾಮಚಂದ್ರಪ್ಪ, ನಹೀದ್ ಅತಾವುಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯ ಕಾರ್ಯದರ್ಶಿಯನ್ನಾಗಿ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಯುಕ್ತರನ್ನು ಮಾಡಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘ITI ಪಾಸ್’ ಆದವರಿಗೆ ಗುಡ್ ನ್ಯೂಸ್: ‘HAL’ನಿಂದ ‘ಅಪ್ರೆಂಟಿಸ್ ತರಬೇತಿ’ಗೆ ಅರ್ಜಿ ಆಹ್ವಾನ | HAL Apprenticeship
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!