Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಕ್ರಮವಹಿಸಲು ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ
KARNATAKA

‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಕ್ರಮವಹಿಸಲು ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧಿಕಾರಾವಧಿ ಮುಕ್ತಾಯಗೊಂಡರೂ, ಚುನಾವಣೆ ನಡೆದಿಲ್ಲ. ಚುನಾವಣೆಗೆ ಆಡಳಿತ ಅಧಿಕಾರಿಗಯನ್ನು ನೇಮಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕ್ರಮ ವಹಿಸುವಂತೆ ಸೂಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ.

ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು, ಕರ್ನಾಟಕ ರಾಜ್ಯ ಸರ್ಕಾರಿ  ನೌಕರರ ಸಂಘದ 2024  ರಿಂದ 2029ನೇ ಸಾಲಿನವರೆಗೆ ಆಡಳಿತ ಮಂಡಳಿಯ ಚುನಾವಣೆಯು ಬಾಕಿ ಇರುತ್ತದೆ. ಪ್ರಸ್ತುತ ಇರುವ ಸಂಘದ ಆಡಳಿತ ಮಂಡಳಿಯ ಅವಧಿಯು ಮುಕ್ತಾಯಗೊಂಡಿದ್ದು, ಸಂಘ ಸಂಸ್ಥೆಗಳ ಕಾಯಿದೆ ಮತ್ತು ನಿಯಮಾವಳಿಗಳ ಅನ್ವಯ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ನಿಗದಿತ ಸಮಯದಲ್ಲಿ ನಡೆದಿರುವುದಿಲ್ಲ ಎಂದಿದ್ದಾರೆ.

ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ ಆಡಳಿತ ಮಂಡಳಿಗೆ ಚುನಾವಣೆಯನ್ನು ನಡೆಸಲು ವಿಫಲವಾಗಿರುತ್ತದೆ. ಸಾಂಕೇತಿಕವಾಗಿ ದಿನಪತ್ರಿಕೆಯಲ್ಲಿ ಒಂದು ಜಾಹಿರಾತು  ನೀಡಿದ್ದು, ಇಲ್ಲಿಯವರೆಗೆ ಕರಡು ಮತದಾರರ ಪಟ್ಟಿ ಚುನಾವಣಾ ವೇಳಾಪಟ್ಟಿ, ಚುನಾವಣಾ ಅಧಿಕಾರಿಯ ನೇಮಕ ಆಗಿರುವುದಿಲ್ಲ. ತಾಲ್ಲೂಕು ಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯಸಮಿತಿಯ ಸದಸ್ಯರು ಮತ್ತು ಇವರ ಮೂಲಕ ರಾಜ್ಯ ಮಟ್ಟದ ಪದಾಧಿಕಾರಿಗಳು ಚುನಾಯಿತರಾಗಬೇಕಾಗಿರುತ್ತದೆ ಎಂದು ಹೇಳಿದ್ದಾರೆ.

ಸಹಕಾರ ಸಂಘಗಳ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ 4ನೇ ವಲಯದ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು 21-08-2024 ರಲ್ಲಿ ಉಪನಿಬಂಧಕರ ಕಾರ್ಯಾಲಯದ ಸಹಕಾರ ಅಭಿವೃದ್ಧಿ ಅಧಿಕಾರಿಗೆ ಲಿಖಿತ ಪತ್ರವನ್ನು ನೀಡಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ವಿರುದ್ಧ ಚುನಾವಣೆ ಸಂಬಂಧ ಬಂದಿರುವ ಅರ್ಜಿಯ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಆಡಳಿತ ಮಂಡಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಮತ್ತು ಚುನಾವಣೆಯವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸುವ ಸಂಬಂಧ ವರದಿ ನೀಡುವಂತೆ ಸೂಚಿಸಿರುತ್ತಾರೆ ಎಂದಿದ್ದಾರೆ.

ಇಲ್ಲಿಯವರೆಗೆ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಅವಧಿ ಮುಗಿದಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸಲು ನಿರ್ದಿಷ್ಟವಾದ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಯಾವುದೇ ಸಂಘ-ಸಂಸ್ಥೆಗಳು ತಮ್ಮ ಆಡಳಿತ ಅವಧಿಯನ್ನು ದುರುಪಯೋಗ ಪಡಿಸಿಕೊಂಡು ಚುನಾಯಿತ ಅವಧಿ ಮುಗಿದ ನಂತರವೂ ಪದಾಧಿಕಾರಿಗಳಾಗಿ ಮುಂದುವರೆಯುವುದು ಕಾನೂನುಬಾಹಿರವಾಗಿರುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸುಮಾರು ನಾಲ್ಕುವರೆ ಲಕ್ಷ ಸರ್ಕಾರಿ ನೌಕರರು ತಮ್ಮ ಪ್ರಾತಿನಿಧಿಕ ಸಂಸ್ಥೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾಯಿತ ಆಡಳಿತ ಮಂಡಳಿಯನ್ನು ಮತ್ತು ಪಾರದರ್ಶಕವಾದ ಆಡಳಿತವನ್ನು ಬಯಸುತ್ತಿದ್ದಾರೆ. ಈಗಿರುವ ಆಡಳಿತ ಮಂಡಳಿಯು ಉದ್ದೇಶಪೂರಕವಾಗಿ ಕೆಲವು ಸರ್ಕಾರಿ ನೌಕರರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಅರ್ಹ ಮತದಾರರ ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳಿರುತ್ತವೆ. ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ನೇಮಕ ಅನಿವಾರ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಆದ ಕಾರಣ ತಾವು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಆಡಳಿತದ ಅವಧಿ ಮುಗಿದಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಹೊಸ ಚುನಾಯಿತ ಆಡಳಿತ ಮಂಡಳಿ ಅಧಿಕಾರಕ್ಕೆ ಬರುವವರೆಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಮತ್ತು ಆಡಳಿತಾಧಿಕಾರಿಗಳ ಮೂಲಕ ಸರ್ಕಾರಿ ನೌಕರರ  ಸಂಘದ 2024-29 ನೇ ಸಾಲಿಗೆ ಪಾರದರ್ಶಕವಾದ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲು ಸೂಚಿಸಬೇಕಾಗಿ ಕೋರಿದ್ದಾರೆ.

BREAKING: ‘ಮನೆ ಊಟ’ಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದ ‘ನಟ ದರ್ಶನ್’ | Actor Darshan

ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

1 Min Read

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

1 Min Read

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

2 Mins Read
Recent News

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

State News
KARNATAKA

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಶಾಸಕರಾಗಿ ಪದಗ್ರಹಣ…

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.