Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್- ಹಮಾಸ್ ಯುದ್ಧದ ಎಫೆಕ್ಟ್ ; ₹5 ಮೌಲ್ಯದ ‘ಪಾರ್ಲೆ ಜಿ ಬಿಸ್ಕತ್ತು’ ಗಾಜಾದಲ್ಲಿ ₹2,300ಕ್ಕೆ ಮಾರಾಟ

06/06/2025 5:52 PM

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

06/06/2025 5:50 PM

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ
KARNATAKA

ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ

By kannadanewsnow0905/09/2024 3:06 PM

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಸಂಬಂಧ ನಡೆದಿರುವ ಸುಮಾರು 23ಕೋಟಿ ರೂಪಾಯಿ ಅವ್ಯವಹಾರವನ್ನು SIT ತನಿಖೆಗೆ ಕೋರಿ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ – ಮಮಇ- 99  ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ  ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ ಗುಜರಾತಿನ ಸೂರತ್ ನಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನೀಡಿ ಸೀರೆಗಳನ್ನು ಕೊಳ್ಳಲಾಗಿರುತ್ತದೆ. ಈ ವಹಿವಾಟಿನಲ್ಲಿ ಅಂದಿನ ಬಿಜೆಪಿಯ  ವಿಧಾನ ಪರಿಷತ್ತಿನ ಸದಸ್ಯರು ಈಗಿನ ರಾಜ್ಯಸಭಾ ಸದಸ್ಯರು ಆದ ಲೇಹರ್ ಸಿಂಗ್ ಭಾಗಿಯಾಗಿರುವ ಆರೋಪಗಳಿರುತ್ತದೆ ಎಂದಿದ್ದಾರೆ.

ಮಾರುಕಟ್ಟೆಯಲ್ಲಿ ಒಂದು  ನೂರು ರೂಪಯಾಯಿಗಳಿಗೆ ದೊರೆಯಬಹುದಾದ ಸೀರೆಗಳನ್ನು ಹೆಚ್ಚಿನ ದರ ನಮೂದಿಸಿ ರಾಜ್ಯದ ಹೊರಭಾಗದಿಂದ ಅಂದಿನ ಬಿಜೆಪಿ ಸರ್ಕಾರ ಕೊಂಡಿರುತ್ತದೆ. ಈ ಸಂಬಂಧ ಮಾರ್ಚ್ 2011 ರಲ್ಲಿ ಕಾಂಗ್ರೆಸ್ ಪಕ್ಷದ ಅಂದಿನ  ವಿಧಾನ ಪರಿಷತ್ತಿನ  ವಿರೋಧ ಪಕ್ಷದ ನಾಯಕರಾದ ಮೋಟಮ್ಮ, ಸದಸ್ಯರಾದ ಆರ್.ವಿ.ವೆಂಕಟೇಶ್, ದಯಾನಂದ್ ಮುಂತಾದವರು ಚರ್ಚೆ ಮಾಡಿ ಹಗರಣದ ತನಿಖೆಗೆ ಒತ್ತಾಯ ಮಾಡಿದ್ದರು. ಸದರಿ 23 ಕೋಟಿ ರೂಪಾಯಿಗಳ ಹಗರಣದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವಾಗಿದ್ದು, ಇದರ ತನಿಖೆ ಆಗಬೇಕೆಂದು ಒತ್ತಾಯ ಮಾಡಿದ್ದರು ಎಂದಿದ್ದಾರೆ.

ಭಾಗ್ಯಲಕ್ಷ್ಮಿ ಸೀರೆ ವಿತರಣೆಗೆ ಗುಜರಾತಿನ ಸೂರತ್ ನಿಂದ ಸೀರೆಗಳನ್ನು ಹೆಚ್ಚು ಹಣ ನೀಡಿ ಪಡೆಯುವ ಮೂಲಕ ದೊಡ್ಡ ಮಟ್ಟದ ಭ್ರಷ್ಟಾಚಾರ ಎಸಗಿ ರಾಜ್ಯ ಸರ್ಕಾರಕ್ಕೆ ನಷ್ಟವನ್ನು ಉಂಟು ಮಾಡಿರುತ್ತಾರೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಮತ್ತು ಎಷ್ಟು ಸಾರ್ವಜನಿಕ ಹಣ ಲೂಟಿ ಆಗಿದೆ ಎಂಬುವ ಕುರಿತು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡದ ಮೂಲಕ ತನಿಖೆ ಮಾಡುವ ಅವಶ್ಯಕತೆ ಇರುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಸೀರೆಗಳ ಪೂರೈಕೆಗೆ ವಿಸ್ತಾರವಾದ ಅವಕಾಶವಿದ್ದು, ನಮ್ಮ ರಾಜ್ಯದಲ್ಲೇ ಸೀರೆಗಳನ್ನು ಕ್ರಯಕ್ಕೆ ಪಡೆದುಕೊಂಡಿದ್ದರೆ ಇಲ್ಲಿನ ನೇಕಾರರಿಗೆ ಮತ್ತು ಕೈ ಮಗ್ಗದ ಸಹಕಾರ ಸಂಘಗಳಿಗೆ ಆರ್ಥಿಕವಾಗಿ ಶಕ್ತಿ ಬರುತ್ತಿತ್ತು. ಹೊರ ರಾಜ್ಯದಿಂದ ಸೀರೆಗಳನ್ನು ಹೆಚ್ಚು ದರಕ್ಕೆ ಪಡೆಯುವುದರ ಮೂಲಕ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ವಿಶೇಷವಾಗಿ ಇಲ್ಲಿನ ನೇಕಾರರಿಗೆ ಮೋಸ ಎಸಗಲಾಗಿದೆ. ಆದುದರಿಂದ ರಾಜ್ಯದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭಾಗ್ಯಲಕ್ಷ್ಮಿ ಯೋಜನೆಯ 2011 ರ ಬಿಜೆಪಿ ಸರ್ಕಾರದ 23 ಕೋಟಿ  ರೂಪಾಯಿಗಳ ಸೀರೆ ಹಗರಣವನ್ನು ವಿಶೇಷ ತನಿಖಾ ತಂಡದ ಮೂಲಕ ತನಿಖೆಗೆ ಒಳಪಡಿಸಬೇಕಾಗಿ ಕೋರಿದ್ದಾರೆ.

ರಾಯಚೂರಲ್ಲಿ ‘ಶಾಲಾ- ಸರ್ಕಾರಿ ಬಸ್’ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

Share. Facebook Twitter LinkedIn WhatsApp Email

Related Posts

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

06/06/2025 5:50 PM2 Mins Read

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM1 Min Read

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM4 Mins Read
Recent News

ಇಸ್ರೇಲ್- ಹಮಾಸ್ ಯುದ್ಧದ ಎಫೆಕ್ಟ್ ; ₹5 ಮೌಲ್ಯದ ‘ಪಾರ್ಲೆ ಜಿ ಬಿಸ್ಕತ್ತು’ ಗಾಜಾದಲ್ಲಿ ₹2,300ಕ್ಕೆ ಮಾರಾಟ

06/06/2025 5:52 PM

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

06/06/2025 5:50 PM

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM
State News
KARNATAKA

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

By kannadanewsnow0906/06/2025 5:50 PM KARNATAKA 2 Mins Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು…

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ ಕೇಸ್: ನಾಳೆ ಕರಾಳ ದಿನವಾಗಿ ವಾಟಾಳ್ ನಾಗರಾಜ್ ಆಚರಣೆ

06/06/2025 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.