ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಡಾ.ಆರಥಿ ಕೃಷ್ಣ, ಎಫ್ ಹೆಚ್ ಜಕ್ಕಪ್ಪನವರ್, ಶಿವಕುಮಾರ್ ಕೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಮಾಡಿದೆ.
ಈ ಹಿಂದೆ ರಮೇಶ್ ಬಾಬು ಅವರು ಆಗ್ನೇಯ ಶಿಕ್ಷಕ್ಷರ ಕ್ಷೇತ್ರದಿಂದ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕಳೆದ ಕೆಲ ವರ್ಷಗಳಿಂದ ರಮೇಶ್ ಬಾಬು ಅವರು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ರಾಜಕೀಯ ಕ್ಷೇತ್ರದಲ್ಲಿ ಅನುಭವ ಹೊಂದಿರುವಂತ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನಕ್ಕೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಸಿಎಂ ಸಿದ್ಧರಾಮಯ್ಯ ಅವರ ಆಪ್ತರೂ ಆಗಿರುವಂತ ರಮೇಶ್ ಬಾಬು ಅವರಿಗೆ, ಸಿಎಂ ಕೋಟಾದಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿರುವುದಾಗಿ ಹೇಳಲಾಗುತ್ತಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ಮಾಹಿತಿ ನೀಡೋದು ಕಡ್ಡಾಯ
SHOCKING : ವಿವಾಹಿತನಿಂದ ನಿರಂತರ ಅತ್ಯಾಚಾರ : ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ.!