ಸುಭಾಷಿತ :

Wednesday, January 29 , 2020 9:37 PM

ಬಿಗ್ ನ್ಯೂಸ್ : ಭರ್ಜರಿ ಗೆಲುವು ಸಾಧಿಸಿದ ರಮೇಶ್ ಜಾರಕಿಹೊಳಿಗೆ `ಉಪಮುಖ್ಯಮಂತ್ರಿ’ ಹುದ್ದೆ? `


Monday, December 9th, 2019 1:30 pm

ಬೆಂಗಳೂರು: ಡಿಸೆಂಬರ್ 5 ರಂದು ನಡೆದ ರಾಜ್ಯ ವಿಧಾನಸಭೆಯ ಕ್ಷೇತ್ರಗಳ ಉಪಚುನಾವನೆಯ ಫಲಿತಾಂಶ ಮತ ಎಣಿಕೆ ಕಾರ್ಯ ಬಹುತೇಕ ಮುಗಿದಿದ್ದು, 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಮೇಶ್ ಜಾರಕಿಹೊಳಿ ಅವರು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ನಡುವೆ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಗೆದ್ದರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದ್ದು, ಬಿಎಸ್ ವೈ ಸರ್ಕಾರದಲ್ಲಿ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗ್ತಾರಾ ಎಂಬುದನ್ನು ಕಾದು ನೋಡಬೇಕು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬರಲು ರಮೇಶ್ ಜಾರಕಿಹೊಳಿ ಪ್ರಮುಖ ಕಾರಣರಾಗಿದ್ದು, ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಕಳೆದ ಕೆಲವು ತಿಂಗಳಿನಿಂದ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಾ ಬಂದಿದೆ. ಇದೀಗ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ರಮೇಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಉಪ ಮುಖ್ಯಮಂತ್ರಿ ಆಗ್ತಾರಾ? ಎಂಬ ಕುತೂಹಲ ಮೂಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions