ಬೆಂಗಳೂರು: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ದಾಖಲಾಗಿದ್ದಂತ ಜಾತಿ ನಿಂದನೆ ಪ್ರಕರಣದಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನಡೆಸಿದರು. ಒಂದು ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷ್ಯ ನಾಶ ಮಾಡಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂಬ ಷರತ್ತು ವಿಧಿಸಿ ನಿರೀಕ್ಷೆಣಾ ಜಾಮೀನು ನೀಡಿದೆ.
ಅಂದಹಾಗೇ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಜಶೇಖರ ತಳವಾರ ಎಂಬುವರು ದಾಖಲಿಸಿದ್ದಂತ ದೂರನ್ನು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ರಮೇಶ್ ಕತ್ತಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ
ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ








