ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಇದೀಗ ಬೆಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ.
ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣದ ಬಾಂಬರ್ ಜೊತೆಗೆ ನೇರ ಸಂಪರ್ಕದಲ್ಲಿದ್ದ ಬೆಂಗಳೂರು ಮೂಲದ ಇಬ್ಬರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದೆ.
ಬಂಧಿತ ಆರೋಪಿಗಳು ರಾಮೇಶ್‌ವರಂ ಕೆಫೆ ಬಾಂಬ್ ಸ್ಪೋಟದ ಬಾಂಬರ್ ಜೊತೆಗೆ ನೇರ ಸಂಪರ್ಕ ಹೊಂದಿದ್ದರು ಎಂಬ ಸಾಕ್ಷ್ಯ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.