ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಇದೀಗ ನ್ಯಾಯಾಲಯವು ಆರೋಪಿ ಮಾಝ್ ಮುನೀರ್ ನನ್ನು 7 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.
ಮಂಗಳೂರು ಗೋಡೆ ಬರಹ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಆರೋಪಿಯಾಗಿದ್ದಂತ ಮಾಝ್ ಮುನೀರ್ ಅಹ್ಮದ್ ಅನ್ನು ಬಂಧಿಸಿ, ಜೈಲಿಗಟ್ಟಲಾಗಿತ್ತು. ಇಂತಹ ಆರೋಪಿಯು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲೂ ಭಾಗಿಯಾಗಿರೋ ಶಂಕೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವ್ಯಕ್ತ ಪಡಿಸಿದ್ದರು.
ಈ ಹಿನ್ನಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡುವಂತೆ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದಂತ ನ್ಯಾಯಾಲಯವು 7 ದಿನಗಳ ಕಾಲ ಆರೋಪಿ ಮಾಝ್ ಮುನೀರ್ ಅಹ್ಮದ್ ನನ್ನು ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.
ಅಂದಹಾಗೇ ಮಾಝ್ ಮುನೀರ್ ಅಹ್ಮದ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಮದ ಪ್ರಮುಖ ಆರೋಪಿಯಾಗಿದ್ದಾನೆ. ಬಂಧನದ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. ಈ ಆರೋಪಿಯನ್ನು ಈಗ ಎನ್ಐಎ ಕಸ್ಟಡಿಗೆ ಪಡೆದಿದೆ.
BREAKING : ಭೂಪಾಲ್ ನ ‘ಟೆಂಟ್ ಹೌಸ್’ ಗೋದಾಮಿನಲ್ಲಿ ‘ಸಿಲಿಂಡರ್’ ಸ್ಫೋಟದಿಂದ ಭಾರಿ ಅಗ್ನಿ ಅವಘಡ
ಕೇಂದ್ರದ ‘ಅನುದಾನ’ ತಾರತಮ್ಯದಿಂದ ರಾಜ್ಯಕ್ಕೆ ‘ಆರ್ಥಿಕ ಸವಾಲು’ಗಳು ಎದುರಾಗಿವೆ : ಕೃಷ್ಣ ಭೈರೇಗೌಡ ಆಕ್ರೋಶ