ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಆರೋಪಿಗಳ ಬ್ಗಗೆ ಕೆಲವು ಎಕ್ಸ್ ಕ್ಲೂಸಿವ್ ಕುರುಹುಗಳು ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತಂತೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ಹಾಗೂ ಮುಂದೆ ಕೈಗೊಳ್ಳಬೇಕಾಗಿರುವಂತ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿರುವಂತ ಆರೋಪಿಯ ಚಹರೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲಿಸಿ, ಆತನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಮೇಶ್ವಂರ ಕೆಫೆಯಲ್ಲಿ ಸಂಭವಿಸಿದಂತ ಬಾಂಬ್ ಸ್ಪೋಟ ಪ್ರಕರಮದ ಆರೋಪಿಯ ಬಗ್ಗೆ ಕೆಲವು ಪ್ರಮುಖವಾದಂತ ಕುರುಹುಗಳು ಸಿಕ್ಕಿದ್ದಾವೆ. ಹೀಗಾಗಿ ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂಬುದಾಗಿ ಹೇಳಿದರು.
WTC – ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಭಾರತ – ಹಿಟ್‌ಮ್ಯಾನ್ ರೋಹಿತ್ ನಾಯಕತ್ವಕ್ಕೆ ಮೆಚ್ಚುಗೆ!
ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ!