ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿನ ಸ್ಪೋಟ ಮಾಡಿದ ವ್ಯಕ್ತಿಯ ಮಾಹಿತಿ ಸಿಕ್ಕಿದ್ದೂ, ಶೀಘ್ರವೇ ಬಂಧನ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬೆಂಗಳೂರಿನ 11 ಕಡೆಯಲ್ಲಿ ರಾಮೇಶ್ವರಂ ಕೆಫೆ ಹೋಟೆಲ್ ತೆರೆದಿದ್ದಾರೆ. 12ನೇ ಕಡೆ ರಾಮೇಶ್ವರಂ ಕೆಫೆ ಓಪನ್ ಮಾಡುತ್ತಿದ್ದಾರೆ. ಇದನ್ನು ಸಹಿಸಲಾರದವರು ಈ ರೀತಿ ಮಾಡಿರಬಹುದು ಅಂತಿದ್ದಾರೆ ಎಂದರು.
ಇದಲ್ಲದೇ ಲೋಕಸಭಾ ಚುನಾವಣೆಯೂ ಬರುತ್ತಿದೆ. ಬೆಂಗಳೂರಿನಲ್ಲಿ ಅನ್ ಸೇವ್ ನಗರ ಮಾಡಬೇಕು ಎಂದು ಹೀಗೆ ಮಾಡಿರಬಹುದು. ಅಲ್ಲದೇ ಬೆಂಗಳೂರು ನಗರಕ್ಕೂ ಹೂಡಿಕೆದಾರರು ಬರುತ್ತಿದ್ದಾರೆ. ಹೀಗೆ ಮಾಡಿದರೇ ಬಂಡವಾಳ ಹಾಕಲು ಬರಲ್ಲ ಅಂತ ಮಾಡಿರಬಹುದು ಎಂದು ಹೇಳಿದರು.
ರಾಮೇಶ್ವರಂ ಕೆಫೆ ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುತ್ತಿದ್ದೇವೆ. ಈಗಾಗಲೇ ಸ್ಪೋಟ ಮಾಡಿದಂತ ಆರೋಪಿಯ ಸುಳಿವು ಸಿಕ್ಕಿದೆ. ಶೀಘ್ರವೇ ಆತನನ್ನು ಬಂಧಿಸುವುದಾಗಿ ತಿಳಿಸಿದರು.
WTC – ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಭಾರತ – ಹಿಟ್‌ಮ್ಯಾನ್ ರೋಹಿತ್ ನಾಯಕತ್ವಕ್ಕೆ ಮೆಚ್ಚುಗೆ!
ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ!