ಬೆಂಗಳೂರು: ದಿ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಇಬ್ಬರು ಆರೋಪಿಗಳ ಎನ್ಐಎ ಕಸ್ಟಡಿ ಅವಧಿಯನ್ನ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ರನ್ನು ಏಪ್ರಿಲ್ 29ರವರೆಗೂ ಎನ್ಐಎ ವಶಕ್ಕೆ ಒಪ್ಪಿಸಿ ಈ ಆದೇಶವನ್ನು ಹೊರಡಿಸಿದೆ.
ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದು ನ್ಯಾಯಾಧೀಶರ ಮುಂದೆ ಹಾಜರು ಮಾಡಿದ್ದರು, ಈ ವೇಳೆ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಇಂದಿಗೆ ಕಸ್ಟಡಿ ಅವಧಿ ಮುಕ್ತಾಯವಾಗಿದೆ ಹೀಗಾಗಿ ಮತ್ತೆ ತಮ್ಮ ವಶಕ್ಕೆ ಆರೋಪಿಗಳನ್ನು ನೀಡುವಂತೆ ಮನವಿ ಮಾಡಿದ್ದರು, ಅದರಂತೆ ನ್ಯಾಯಾಲಯವು ಮತ್ತೆ ಏಪ್ರಿಲ್ 29ರವರೆಗೂ ಎನ್ಐಎ ವಶಕ್ಕೆ ಒಪ್ಪಿಸಿದೆ.