ಬೆಂಗಳೂರು : ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣದ ಆರೋಪಿಗಳಾಗಿರುವ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಶಿವಮೊಗ್ಗ ಮಾದರಿಯ ಐಸಿಸ್ ಸಂಚು ಪ್ರಕರಣದಲ್ಲಿಯೂ ಸಹ ಆರೋಪಿತರ ಸಂಚಿರುವುದರ ಕುರಿತು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.
ಬೆಂಗಳೂರಿನ ಅಲ್-ಹಿಂದ್ ಐಸಿಸ್ ಮಾದರಿ ಪ್ರಕರಣದ ಆರೋಪಿಗಳಾಗಿರುವ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಈ ಹಿಂದೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿತ್ತು.
ಶಿವಮೊಗ್ಗ ಜಿಲ್ಲೆಯ ಮೂಲದವರಾಗಿದ್ದ ಆರೋಪಿಗಳು ಐಸಿಸ್ನ ವಿಚಾರಧಾರೆಗಳಿಂದ ಪ್ರೇರಿತರಾಗಿದ್ದು, ಮುಸ್ಲಿಂ ಯುವಕರನ್ನ ಐಸಿಸ್ನತ್ತ ಸೆಳೆಯುತ್ತಿದ್ದರು. 2022ರ ಸೆಪ್ಟೆಂಬರ್ 19ರಂದು ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ಸಂಚಿನ ಕುರಿತು ಪ್ರಕರಣ ದಾಖಲಾಗಿತ್ತು. ಮತ್ತು ಅದೇ ವರ್ಷ ನವೆಂಬರ್ 4ರಂದು ಎನ್ಐಎ ತನಿಖೆಯನ್ನು ವಹಿಸಿಕೊಂಡಿತ್ತು.