ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ಎಎಯಿಂದ ಇಂದು ಆರೋಪಿಯ ಪೋಟೋ ಬಿಡುಗಡೆ ಮಾಡಲಾಗಿದೆ. ಜೊತೆಗೆ ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಷ್ಟ್ರೀಯ ತನಿಖಾ ದಳವು ( NIA) ಈ ಪೋಟೋದಲ್ಲಿ ಇರುವಂತ ವ್ಯಕ್ತಿ ದಿನಾಂಕ 01-03-2024ರಂದು ರಾಮೇಶ್ವರಂ ಕೆಫೆಯಲ್ಲಿ ಉಂಟಾದಂತ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ. ಈತ ಮೋಸ್ಟ್ ವಾಂಟೆಂಡ್ ವ್ಯಕ್ತಿಯಾಗಿದ್ದಾನೆ ಎಂದು ತಿಳಿಸಿದೆ.
ಇನ್ನೂ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ. ಈ ಸಂಬಂಧ ಮಾಹಿತಿಗಾಗಿ ಸಂಪರ್ಕಿಸಿ 080-29510900, 8904241100ಗೆ ಕರೆ ಮಾಡಿ. ಇಲ್ಲವೇ info.blr.nia@gov.in ಗೆ ಮೇಲ್ ಕೂಡ ಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದೆ.
BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ
ಆಧುನಿಕ ‘ಭಾಗೀರಥಿ’ಯ ಪ್ರಯತ್ನದ ಫಲ : ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಿ ನೀರು ತರಿಸಿದ ಗೌರಿ ನಾಯ್ಕ್