ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಅಲ್ಲಿ ಮುಸಾವಿರ್ ಹಾಗೂ ಮತ್ತಿನ್ ಎನ್ನುವ ಇಬ್ಬರು ಉಗ್ರರನ್ನು ಬಂದಿಸಿದ್ದು ಇದೀಗ ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಅಧಿಕಾರಿಗಳು ಹಾಜರುಪಡಿಸಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಗಳನ್ನು ನಿನ್ನೆ ಪಶ್ಚಿಮ ಬಂಗಾಳದಲ್ಲಿ ಎನ್ಐಎ ಅಧಿಕಾರಿಗಳು ದಿಗ ಎಂಬ ಊರಿನ ಹೋಟೆಲ್ ನಲ್ಲಿ ಇವರನ್ನು ಬಂಧಿಸಲಾಗಿದೆ.
ಶಂಕಿತ ಉಗ್ರ ಮುಸಾವಿರ್ ಜೊತೆ ಮತೀನ್ ತಾಹ ಎನ್ನುವವರನ್ನ ಅರೆಸ್ಟ್ ಮಾಡಿದ್ದಾರೆ. ನಿನ್ನೆ ರಾತ್ರಿ ಎನ್ಐಎ ಅವರು ಅರೆಸ್ಟ್ ಮಾಡಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿದ ಬಳಿಕ ಇಂದು ಸಂಜೆ ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಕರೆತರುತ್ತಾರೆ ನಂತರ ಪೊಲೀಸರಿಗೆ ಹ್ಯಾಂಡಲ್ ಮಾಡಿ ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.