ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಳಿಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಬಂಧಿಸಲಾಗಿದ್ದಂತ ಇಬ್ಬರು ಆರೋಪಿಗಳಿಗೆ ಇಂದು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೊಹಮ್ಮದ್ ಮತೀನ್ ಹಾಗೂ ಮುಸಾವಿರ್ ಹುಸೇನ್ ಎಂಬಾತನನ್ನು ಬಂಧಿಸಲಾಗಿತ್ತು.
ಬಂಧಿತ ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿ, ಎನ್ಐಎ ಅಧಿಕಾರಿಗಳು ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ಪಡೆದಿದ್ದರು. ಎನ್ಐಎ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಇಂದು ಎನ್ಐಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದಂತ ಎನ್ಐಎ ಕೋರ್ಟ್, ಮೊಹಮ್ಮದ್ ಮತೀನ್ ಹಾಗೂ ಮುಸಾವರಿ ಹುಸೇನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
BREAKING: ‘ಮೇಕೆದಾಟು ಸಂಗಮ’ದಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ‘ಐವರು ವಿದ್ಯಾರ್ಥಿ’ಗಳು ನೀರುಪಾಲು