ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ 5 ಕಡೆ ಹಾಗೂ ಚೆನ್ನೈ 3 ಕಡೆ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಶಂಕಿತರಿಗೆ ಹಣದ ನೆರವು, ಉಗರ ಪರ ಹಣ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ಇಂದು ಬೆಂಗಳೂರಿನ ಐದು ಕಡೆ ಚೆನ್ನೈನ ಮೂರು ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.