ಹುಬ್ಬಳ್ಳಿ : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ನೇರ ಹೊಣೆಗಾರರು. ದೇಶದಲ್ಲಿ ಶೇ. 90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, ಈಗ ತಮಗೆ ಬೆಂಬಲ ಸಿಗಬಹುದಾದಂತಹ ರಾಜ್ಯಗಳಲ್ಲಿ ಮತ್ತೆ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು.
ಅಪರಿಚಿತ ಮಹಿಳೆಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ಲೈಂಗಿಕ ಕಿರುಕುಳ: ಹೈಕೋರ್ಟ್ ಮಹತ್ವದ ಅಭಿಪ್ರಾಯ!
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ಆಡಳಿತದಲ್ಲಿ ಮೂಲಭೂತವಾದಿಗಳು ಮತ್ತು ಉಗ್ರ ಚಟುವಟಿಕೆಗಳಿಗೆ ಕರ್ನಾಟಕ ಪ್ರಮುಖ ಸ್ಥಾನವಾಗಿ ಮಾರ್ಪಡುತ್ತಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಶ್ಲೀಲ ವೀಡಿಯೋ ಪ್ರದರ್ಶನ:ಉಲ್ಲು ಆ್ಯಪ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ‘NCPCR’ ಕೇಂದ್ರ ಸರ್ಕಾರಕ್ಕೆ ಶಿಫಾರಸು
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಫ್.ಎಸ್.ಎಲ್. ವರದಿಯಲ್ಲಿ ದೃಢಪಟ್ಟಿದೆ. ಹಾಗಿದ್ದರೂ ಕ್ರಮ ಕೈಗೊಂಡಿಲ್ಲ ಏಕೆ? ಸಾಲದ್ದಕ್ಕೆ ಮತ್ತಷ್ಟು ವಿಡಿಯೋ ಕಳಿಸಿ ತೀರ್ಮಾನಿಸುತ್ತೇವೆ ಎಂದಿದ್ದೀರಿ. ಅಪರಾಧಿಗಳನ್ನು ಇನ್ನೂ ಎಷ್ಟು ರಕ್ಷಿಸಿಕೊಳ್ಳುತ್ತೀರಿ? ಎಂದು ಜೋಶಿ ತರಾಟೆಗೆ ತೆಗೆದುಕೊಂಡರು.
‘ಗ್ಯಾರಂಟಿ’ ಯೋಜನೆಯಿಂದ ನಮ್ಮ ಹೊಟ್ಟೆ ತುಂಬುತ್ತಿದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ವೃದ್ಧೆ ಶ್ಲಾಘನೆ
ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕಟ್ಟರ್ ಇಸ್ಲಾಮಿಕ್ ಮೂಲಭೂತ ವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಪರಿಣಾಮ ರಾಜ್ಯದ ಸಾಮಾನ್ಯ ಜನರ ಬದುಕು ಅಸುರಕ್ಷಿತವಾಗಿದೆ. ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.
ಕೇವಲ ವೋಟ್ ಬ್ಯಾಂಕ್‌ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ ಎಂದು ಅವರು ಮನವಿ ಮಾಡಿದರು. ಮೊದಲು ಮುಖ್ಯಮಂತ್ರಿಗಳು ಇದನ್ನು ನಿಲ್ಲಿಸಿ. ಈ ಎರಡೂ ಘಟನೆ ರಾಜ್ಯದಲ್ಲಿ ಆಡಳಿತ ಮತ್ತು ಆಂತರಿಕ ಭದ್ರತೆ ವೈಫಲ್ಯಕ್ಕೆ ನಿದರ್ಶನ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟ ಎರಡೂ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಎನ್‌ಐಎ ತನಿಖೆಗೆ ವಹಿಸಬೇಕು ಎಂದರು.