ತುಮಕೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚಿಗೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗಳು ಹಾಗೂ ಎನ್ಐಎ ತಂಡದ ಅಧಿಕಾರಿಗಳು ಇದೀಗ ತುಮಕೂರು ಜಿಲ್ಲೆಯ ಇಂಂಚಿನ್ಚು ಜಾಗವನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭಾ ಅವಧಿ ಮುಗಿದ ಬಳಿಕ ‘ಬಿಜೆಪಿ’ಗೆ ಸೇರ್ಪಡೆಯಾಗುತ್ತೇನೆ : ಸಂಸದೆ ಸುಮಲತಾ ಅಂಬರೀಷ್
ತುಮಕೂರಿನಲ್ಲಿ ಇಂಚಿಂಚು ಸ್ಥಳಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಕಂಟ್ರೋಲ್ ರೂಮ್, ಪಾಲಿಕೆಯ ಸಿಸಿಟಿವಿಗಳು ಹಾಗೂ ಪೊಲೀಸ್ ಕಂಟ್ರೋಲ್ ಸೇರಿದಂತೆ ಹಲವು ತೀವ್ರವಾದ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸಿರಿಯಾ ಟ್ರಫಲ್ ಬೇಟೆಗಾರರ ಮೇಲೆ ‘ಐಎಸ್’ ದಾಳಿ: 18 ಸಾವು, 50 ಕ್ಕೂ ಹೆಚ್ಚು ಮಂದಿ ನಾಪತ್ತೆ
ಬೆಂಗಳೂರು ಡಿಸಿಪಿ ಎನ್ಐಎ ತಂಡದಿಂದ ತೀವ್ರವಾದ ಶೋಧ ನಡೆಯುತ್ತಿದೆ. ತುಮಕೂರು ಬೆಂಗಳೂರಿಗೆ ಹತ್ತಿರವಾದ ಹಿನ್ನೆಲೆಯಲ್ಲಿ ಇದೀಗ ಆರೋಪಿಯು ಈ ಒಂದು ಭಾಗದಲ್ಲಿ ಕೂಡ ಸಂಚರಿಸಿರಬಹುದು ಎಂದು ಇದೀಗ ಪೊಲೀಸ್ ಅಧಿಕಾರಿಗಳು ಹಾಗೂ NIA ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
10 ಲಕ್ಷ ರೂಪಾಯಿ ಬಹುಮಾನ
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ.
ಅದಲ್ಲದೆ, ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ.ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ ಕಾರಣವಾದಲ್ಲಿ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಶಂಕಿತ ಉಗ್ರನ ಮಾಹಿತಿಯನ್ನು 08029510900, 8904241100 ತಿಳಿಸುವಂತೆ ಎನ್‌ಐಎ ತಿಳಿಸಿದ್ದು, ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.